ರಾಜ್ಯದ ಜನತೆಗೆ ಭರ್ಜರಿ ನ್ಯೂಸ್.!! ಮರಳು ಪೂರೈಕೆಗೆ ಮರಳು ನೀತಿ ಜಾರಿ

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಕಡಿಮೆಯಾದ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಹಾಗೂ ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿಯನ್ನು ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ S S ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

Sand policy implemented for sand supply

ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವು ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆಯೇ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ.

ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು. ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ. ನಿಗದಿಪಡಿಸಲಾಗಿದೆ.

ಇದನ್ನು ಓದಿ: ವಿದ್ಯಾರ್ಥಿಗಳಿಗಾಗಿ ಬಂತು ಹೊಸ ಸ್ಕಾಲರ್ಶಿಪ್: ಇದ್ರಲ್ಲಿ ಸಿಗುತ್ತೆ ಬರೋಬ್ಬರಿ ₹1,20,000

4, 5 ಶ್ರೇಣಿಗಳ ಹಳ್ಳ, ನದಿ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇದೇ ರೀತಿ ಸಾರ್ವಜನಿಕವಾಗಿ ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕವಾಗಿ ಮರಳು ಬ್ಲಾಕ್ ವಿಲೇವಾರಿ ಮಾಡುವ ನಿಯಮದಲ್ಲಿ ತಿದ್ದುಪಡಿಯನ್ನು ಮಾಡಲಾಗಿದೆ.

ನೂತನ ನೀತಿಗಳಂತೆ ಮರಳು ಬ್ಲಾಕ್ ಗಳ ಟೆಂಡರ್ ನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಿದ ಮರಳು ಬ್ಲಾಕ್ ಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ವಿಕಲಚೇತನ ಹಾಗೂ ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಪ್ರತಿಯೊಂದು ಮೆಟ್ರಿಕ್ ಟನ್ ಮರಳು ಏಕರೂಪದ ಮಾರಾಟದ ದರ 850 ರೂ. ನಿಗದಿಪಡಿಸಲಾಗಿದೆ ಎಂದು ಮಾಹಿತಿುನ್ನು ನೀಡಿದ್ದಾರೆ.

ಇತರೆ ವಿಷಯಗಳು:

ಈ ಸ್ಟೂಡೆಂಟ್ಸ್‌ಗೆ ಸಿಕ್ತು ಸೂಪರ್‌ ಡೂಪರ್‌ ಆಫರ್.!!‌ ಒಂದೇ ಕ್ಲಿಕ್‌ನಲ್ಲಿ ನಿಮ್ಮದಾಗುತ್ತೆ ₹75,000

ನಿರುದ್ಯೋಗಿಗಳಿಗೆ ಸಿಕ್ತು ಕೂಲ್‌ ಆಫರ್.!! ಈ ಯೋಜನೆಯಡಿ ತಿಂಗಳಿಗೆ ಉಚಿತ ₹5000

Leave a Comment

rtgh