ರಾಜ್ಯದಲ್ಲಿ ಇಂದಿನಿಂದ 2 ದಿನ ಮದ್ಯ ಮಾರಾಟ ಬಂದ್‌!

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್‌ ಆಗಲಿದೆ. ಮದ್ಯ ಮಾರಾಟ ಬಂದ್‌ ಮಾಡಲು ಜಿಲ್ಲಾಡಳಿತ ಆದೇಶ ಮಾಡಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಮದ್ಯ ಮಾರಾಟ ನಿಲ್ಲಿಸಲಾಗುತ್ತದೆ. ಹಾಗಾಗಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

Liquor ban

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಇರುವ ಕಾರಣಕ್ಕೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ನಡೆಯಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಮಾಡಲಾಗಿದೆ.

ಇಂದಿನಿಂದ ಬಜರಂಗದಳ, ವಿಶ್ವಹಿಂದೂ ಪರಿಷತ್, ಹಾಗೂ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ದತ್ತಜಯಂತಿಯು ಪ್ರಾರಂಭವಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಜೆಲ್ಲೆಯ ವಿವಿಧ ಭಾಗದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಕಾರಣಕ್ಕೆ ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.

ಈ ಉತ್ಸವದಲ್ಲಿ 30,000 ಸಾವಿರ ಜನರಿಂದ 35,000 ಸಾವಿರ ಜನ ಭಕ್ತಾಧಿಗಳು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಸ್ವಾಮೀಜಿಗಳು ಹಾಗೂ ಮಠಾಧೀಶರು ಭಾಗವಹಿಸಲಿದ್ದೂ. ಇನ್ನು ಡಿಸೆಂಬರ್‌ 14ರಂದು ಬೆಳಿಗ್ಗೆ 4 ಗಂಟೆಗೆ ಭಕ್ತಾಧಿಗಳು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲೂ ಸಾವಿರಾರು ಜನ ಸೇರುವ ಸಾಧ್ಯತೆ ಇದೆ. ಹಾಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹಾಗೂ ಪೊಲೀಸ್‌ ಬಂದೋಬಸ್ತ್‌ ಮಾಡಿರುವುದಾಗಿ ಜಿಲ್ಲಾಡಳಿತ ಹೇಳಿದೆ.

ಇತರೆ ವಿಷಯಗಳು:

ಮಕ್ಕಳ ಬಿಸಿಯೂಟಕ್ಕೆ ಇನ್ನಷ್ಟು ಬಲ.!! ಕೇಂದ್ರದಿಂದ ಗುಡ್‌ ನ್ಯೂಸ್

ರೈತ ಬಾಂಧವರಿಗೆ ಸಿಹಿ ಸುದ್ದಿ.!! ನೀರಾವರಿ ಸೌಲಭ್ಯಕ್ಕೆ ಶೇ. 80% ರಷ್ಟು ಸಬ್ಸಿಡಿ

Leave a Comment

rtgh