ರಾಜ್ಯದ `SC-ST’ ಯವರಿಗೆ ಗುಡ್ ನ್ಯೂಸ್.!! ವಕೀಲರ ನೇಮಕಾತಿಯಲ್ಲಿ ಶೇ. 24ರಷ್ಟು ಮೀಸಲಾತಿ ಜಾರಿ

ಹಲೋ ಸ್ನೇಹಿತರೇ, ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಟ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರ ನೇಮಕಾತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

Appointment of lawyers Reservation
Appointment of lawyers Reservation

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರು ಮಾನ್ಯ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮತ್ತು ನಿಗಮಗಳ ಅಧಿಕಾರಿಗಳೊಂದಿಗೆ ದಿನಾಂಕ:01-06-2023 ರಂದು ಜರುಗಿದ ಸಭೆಯಲ್ಲಿ, ‘ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡವಳಿಯಲ್ಲಿ ಕ್ರಮವಹಿಸಲು ನಿರ್ದೇಶನವಿರುತ್ತದೆ. ಅದರಂತೆ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸುವಂತೆ ಶೇ.24 ರಷ್ಟು ಪರಿಶಿಷ್ಟ ಜಾತಿ/ ಪಂಗಡದವರಿಗೆ ಪ್ರಾತಿನಿಧ್ಯತೆ ನೀಡಬಹುದೆಂಬ ಅಭಿಪ್ರಾಯದೊಂದಿಗೆ ಪ್ರಸ್ತಾವನೆಯನ್ನು ಕಾನೂನು ಇಲಾಖೆಗೆ ಕಳುಹಿಸಲು ಸೂಕ್ತ ಆದೇಶವನ್ನು ಹೊರಡಿಸುವಂತೆ ಕೋರಿರುತ್ತಾರೆ.

ಇದನ್ನು ಓದಿ: ಜ.1ರಿಂದ ಈ ನಿಯಮ ಫುಲ್ ಚೇಂಜ್.!! ರೀಚಾರ್ಚ್‌ ಬೆಲೆ ಮತ್ತೆ ಹೆಚ್ಚಳ

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಕಾನೂನು ಇಲಾಖೆಯ ಟಿಪ್ಪಣಿಯಲ್ಲಿ “ಕರ್ನಾಟಕ ರಾಜ್ಯಪತ್ರ ಸಂಖ್ಯೆ: ಸಂವ್ಯಶಾಇ 29 ಶಾಸನ 2022, ದಿನಾಂಕ:23.10.2022ರಲ್ಲಿ ಅಧ್ಯಾದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ ಶೇಕಡ 17ರಷ್ಟು ಮತ್ತು ಅನುಸೂಚಿತ ಪಂಗಡಗಳಿಗೆ ಶೇಕಡ 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದಲೇ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಅಧ್ಯಾದೇಶದಲ್ಲಿ ಹೇಳಿರುವಂತೆ ಒಟ್ಟು ಶೇಕಡ 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ” ಎಂದು ಅಭಿಪ್ರಾಯವನ್ನು ನೀಡಿರುತ್ತದೆ.

ಈ ಆದೇಶವನ್ನು ಕಾನೂನು ಇಲಾಖೆಯ ಟಿಪ್ಪಣಿ ಸಂಖ್ಯೆ: LAW/521/OPN/2024, ದಿನಾಂಕ:22.10.2024 ರಲ್ಲಿ ನೀಡಿರುವ ಅಭಿಪ್ರಾಯದನ್ವಯ ಹೊರಡಿಸಲಾಗಿದೆ.

ಇತರೆ ವಿಷಯಗಳು:

ಸಿಎಂನಿಂದ ಬಂತು ಖಡಕ್‌ ವಾರ್ನಿಂಗ್‌!! 20 ಲಕ್ಷಕ್ಕೂ ಅಧಿಕ ರೇಷನ್‌ ಕಾರ್ಡ್‌ ರದ್ದು

ಕೆಎಸ್​ಆರ್​ಟಿಸಿ, ಬಿಎಂಟಿಸಿ ಬೃಹತ್ ಮುಷ್ಕರ.!! ಈ ಬೇಡಿಕೆ ಈಡೇರಿಸುವಂತೆ ಎಚ್ಚರಿಕೆ

Leave a Comment

rtgh