ಹಲೋ ಸ್ನೇಹಿತರೇ, ಮಾಜಿ ಸಿಎಂ ಎಸ್ ಕೃಷ್ಣಅವರ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ರೀತಿಯ ಸರ್ಕಾರಿ ಗೌರವಗಳೊಂದಿಗೆ SM ಕೃಷ್ಣರವರ ಅಂತ್ಯಕ್ರಿಯೆಯನ್ನು ನಡೆಸಲು ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ: ಅಪ್ಪನ ‘ಆಸ್ತಿ’ಯಲ್ಲಿ ಮಗಳಿಗೆ ಪಾಲಿದೆಯಾ.? ಯಾರಿಗೆ ಎಷ್ಟು ಪಾಲು.?
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ S.M ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದಂತಹ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕವಾಗಿ ಪ್ರಕಟಿಸಿದೆ.ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿಯ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಹಾಗೂ ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕವಾಗಿ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆಯೇ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.
ಇತರೆ ವಿಷಯಗಳು:
ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ನಿಮಗಿಲ್ಲ 19ನೇ ಕಂತಿನ ಹಣ
ರೈತರೇ ಇತ್ತ ಕಡೆ ಗಮನಕೊಡಿ.!! ಈ ಯೋಜನೆಯಡಿ ನಿಮ್ಮದಾಗಲಿದೆ 3 ಲಕ್ಷ ರೂಪಾಯಿ